Udupi: ಮೀನು ಹಿಡಿಯಲು ಹೋದ ಈರ್ವರು
Tuesday, March 26, 2024
ಉಡುಪಿ: ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಕೂರು ಹೊಸಾಳ ಸಮೀಪದ ಸೀತಾನದಿಯಲ್ಲಿ ಮಂಗಳವಾರ ಸಂಭವಿಸಿದೆ.
ಹೊಸಾಳ ನಿವಾಸಿಗಳಾದ ಪ್ರಶಾಂತ (35) ಹಾಗೂ ಶ್ರೀಶ (21) ಸಾವನ್ನಪ್ಪಿದ ದುರ್ದೈವಿಗಳು.
ಬೆಳಿಗ್ಗೆ 9 ಗಂಟೆ ಸುಮಾರಿಗೆ ಪ್ರಶಾಂತ್ ಹಾಗೂ ಶ್ರೀಶ ಮನೆ ಸಮೀಪದ ಕೂಗಳತೆ ದೂರದ ಸೀತಾನದಿಗೆ ಮೀನು ಹಿಡಿಯಲು ತೆರಳಿದ್ದರು. ಮೀನಿಗಾಗಿ ಬಲೆ ಹಾಕುತ್ತಿರುವ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ಸಮೀಪದಲ್ಲೇ ಬಟ್ಟೆ ಒಗೆಯುತ್ತಿದ್ದ ಮಹಿಳೆ ಗಮನಿಸಿ ಸ್ಥಳೀಯರಿಗೆ ಸುದ್ದಿ ಮುಟ್ಟಿಸಿದ್ದರು. ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಈರ್ವರು ಸಾವನ್ನಪ್ಪಿದ್ದಾರೆ.
ಬ್ರಹ್ಮಾವರ ಠಾಣಾಧಿಕಾರಿ ಮಧು ಪಿ.ಎಸ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.