Ullal: ಭಂಡಾರಮನೆ ಕಟ್ಟಡವನ್ನು ನೆಲಸಮಗೊಳಿಸಿದ ಕಿಡಿಗೇಡಿಗಳು

Ullal: ಭಂಡಾರಮನೆ ಕಟ್ಟಡವನ್ನು ನೆಲಸಮಗೊಳಿಸಿದ ಕಿಡಿಗೇಡಿಗಳು


ಉಳ್ಳಾಲ: ಪುರಾಣ ಪ್ರಸಿದ್ಧ ಕೋಟೆಕಾರು ಗ್ರಾಮದ ಕಾರಣೀಕ ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣ ಗೊಳ್ಳುತ್ತಿದ್ದ ನೂತನ ಭಂಡಾರಮನೆ ಕಟ್ಟಡವನ್ನು ಕಿಡಿಗೇಡಿಗಳು ಭಾನುವಾರ ಬೆಳಿಗ್ಗೆ ಜೆಸಿಬಿಯಲ್ಲಿ ನೆಲಸಮಗೊಳಿಸಿದ ಘಟನೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ವಿವರ: 

ಕೊಂಡಾಣ ಕ್ಷೇತ್ರದ ಭಂಡಾರ ಮನೆ ಖಾಸಗಿ ಒಡೆತನದಲ್ಲಿತ್ತು. ಇದಕ್ಕೆ ಬೀಗ ಹಾಕಲು ಆಡಳಿತ ಸಮಿತಿಗೆ ಖಾಸಗಿ ಒಡೆತನದವರ ವಿರೋಧ ಇತ್ತು. ಈ ಹಿನ್ನೆಲೆಯಲ್ಲಿ ಕ್ಷೇತ್ರದ ದೈವಗಳಿಗೆ ಬೇರೆಯೇ ಭಂಡಾರಮನೆ ನಿರ್ಮಿಸಲು ಜಮೀನನ್ನು ವ್ಯವಸ್ಥಾಪನಾ ಸಮಿತಿಯವರು ನಿರ್ಧರಿಸಿದ್ದರು. ಈ ವಿಚಾರವನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮರ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು.

ನೂತನ ಭಂಡಾರ ಮನೆ ನಿರ್ಮಾಣ ಮಾಡಲು ಇತ್ತೀಚೆಗೆ ಜಾಗ ಕೂಡಾ ಖರೀದಿಸಿದ್ದರು. ಆ ಜಾಗದಲ್ಲಿ ಕಳೆದ ಜನವರಿ 8 ರಂದು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಮುಂದಾಳುತ್ವದಲ್ಲಿ ನೂತನ ಭಂಡಾರ ಮನೆಗೆ ಶಿಲಾನ್ಯಾಸ ಮಾಡಲಾಗಿತ್ತು. ಇದರ ಬಳಿಕ ನೂತನ ಕಟ್ಟಡ ಕಾಮಗಾರಿ ನಿರ್ಮಾಣ ಹಂತದಲ್ಲಿ ಇತ್ತು. ಈ ಕಟ್ಟಡವನ್ನು ಭಾನುವಾರ ಬೆಳಿಗ್ಗೆ ಕಿಡಿಗೇಡಿಗಳು ಜೆಸಿಬಿಯಿಂದ ಏಕಾ ಏಕಿ ನಿರ್ಮಾಣ ಹಂತದ ಭಂಡಾರ ಮನೆಯನ್ನ ನೆಲಸಮ ಮಾಡಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು, ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್, ಎಸಿಪಿ ಧನ್ಯಾ ನಾಯಕ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್ ಮತ್ತು ಸ್ಥಳೀಯರು ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article