Bantwal: ಪೊಳಲಿಯಲ್ಲಿ ಸಂಭ್ರಮದ ಮಹಾರಥೋತ್ಸವ
Thursday, April 11, 2024
ಬಂಟ್ವಾಳ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಮಹಾ ರಥೋತ್ಸವವು ಸಾವಿರಾರು ಭಕ್ತರ ಸೇರುವಿಕೆಯಲ್ಲಿ ಸಂಭ್ರಮ,ಸಡಗರದಿಂದ ಗುರುವಾರ ಸಂಜೆ ನಡೆಯಿತು.
ಶಾಸಕ ರಾಜೇಶ್ ನಾಯ್ಕ್, ದೇವಳದ ತಂತ್ರಿ ಸುಭ್ರಹ್ಮಣ್ಯ ತಂತ್ರಿ ಹಾಗೂ ದೇವಳದ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಕೆ. ರಾಮ್ ಭಟ್, ಪರಮೇಶ್ವರ ಭಟ್, ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊಕ್ತೇಸರರಾದ ಯು. ತಾರನಾಥ ಅಳ್ವ, ಚೇರಾ ಸೂರ್ಯ ನಾರಾಯಣ ರಾವ್, ಅಮ್ಮುಂಜೆಗುತ್ತಿನವರು, ಉಳಿಪಾಡಿಗುತ್ತಿನವರು, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ದೇವಳದ ಪ್ರಮುಖರು, ಸಾವಿರ ಸೀಮೆಯ ಭಕ್ತಾಧಿಗಳು ಪಾಲ್ಗೊಂಡಿದ್ದರು.
ಇದೇ ವೇಳೆ ಆಕರ್ಷಕ ಸುಡುಮದ್ದು ಪ್ರದರ್ಶನವನ್ನು ಭಕ್ತರು ಕಣ್ತುಂಬಿಕೊಂಡರು.