Karkala: ದಿವಾಕರ್ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ

Karkala: ದಿವಾಕರ್ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ


ಕಾರ್ಕಳ: ನಿಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿವಾಕರ್ ಶೆಟ್ಟಿ ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಇವರನ್ನು ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹಾಗೂ ಪಕ್ಷದ ಅಧ್ಯಕ್ಷ ಕೆ. ಸದಾಶಿವ ದೇವಾಡಿಗ ಅವರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡವವರನ್ನು ಕುರಿತು ಉದಯ ಶೆಟ್ಟಿ ಮುನಿಯಾಲು ಮಾತನಾಡಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡು ಲೋಕಸಭಾಕ್ಷೇತ್ರದ ನಮ್ಮ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆ ಅವರ ಗೆಲುವಿಗೆ ಶ್ರಮಿಸುವಂತೆ ವಿನಂತಿಸಿ, ಅಭಿನಂದಿಸಿದರು.

ನಿಟ್ಟೆ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುರೇಶ ಶೆಟ್ಟಿ, ಇ೦ಟಕ್ ತಾಲೂಕು ಅಧ್ಯಕ್ಷ ದಿವಾಕರ್, ಭಾರತ್ ಶೆಟ್ಟಿ, ರೋಬೋಟ್, ಸುಧಾಕರ ಶೆಟ್ಟಿ, ಸುಬಿತ್ ಕುಮಾರ್, ನವೀನ್ ದೇವಾಡಿಗ, ಮಧುಕರ್ ಶೆಟ್ಟಿ, ಸುನೀಲ್ ಭಂಡಾರಿ, ಕೃಷ್ಣ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article