Mangalore: ಎನ್‌ಎಸ್‌ಯುಐನ 54ನೇ ಸಂಸ್ಥಾಪನಾ ದಿನಾಚರಣೆ
Wednesday, April 10, 2024
ಮಂಗಳೂರು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ)ದ 54ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದ.ಕ. ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಮಂಗಳವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ, ರಾಜ್ಯ ಕಾರ್ಯದರ್ಶಿ ಸಿರಾಜ್ ಗುದ್ರು, ಜಿಲ್ಲಾ ಉಪಾಧ್ಯಕ್ಷರಾದ ಕೀರ್ತನ್ ಕೊಡಪಾಲ, ನಜೀಬ್ ಮಂಚಿ, ಸುಖ್ವಿಂದರ್ ಸಿಂಗ್, ಶಾನ್ ಸಿರಿ, ಹರ್ಷನ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ವಿನೋಲಾ ಮತ್ತಿತರರು ಉಪಸ್ಥಿತರಿದ್ದರು.