Mangalore: ದೇಶದ ಪ್ರಜಾಪ್ರಭುತ್ವದ ಉಳಿವಿಗಾಗಿ ಚುನಾವಣೆ: ಜೆ.ಆರ್. ಲೋಬೊ
Thursday, April 11, 2024
ಮಗಳೂರು: ನಗರದ ಶಿವಭಾಗ್ ವಾರ್ಡಿನಲ್ಲಿ ಎ.11 ರಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ.ಆರ್. ಲೋಬೊ ಅವರು ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಯವರ ಪರವಾಗಿ ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಚುನಾವಣೆ ದೇಶದ ಪ್ರಜಾಪ್ರಭುತ್ವ ಉಳಿವಿಗಾಗಿ ಮತ್ತು ದೇಶದ ಅಭಿವೃದ್ಧಿಗಾಗಿ ನಡೆಯಲಿದೆ. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದ ಬಿಜೆಪಿ ಆಡಳಿತದಲ್ಲಿ ದೇಶ ಯಾವುದೇ ಕ್ಷೇತ್ರದಲ್ಲಿ ಪ್ರಗತಿ ಕಾಣಲಿಲ್ಲ. ಆರ್ಥಿಕತೆ ಕುಸಿದಿದೆ. ಜನ ಸಾಮಾನ್ಯರ ಬದುಕು ಕಷ್ಟಕರವಾಗಿದೆ. ಅಭಿವೃದ್ಧಿ ಕುಂಠಿತವಾಗಿದೆ. ಜಿಲ್ಲೆಯಲ್ಲಿ ಕೂಡ ಹೊಸ ಯೋಜನೆಗಳು ಅನುಷ್ಠಾನಕ್ಕೆ ಬಂದಿರುವುದಿಲ್ಲ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಜನರು ಮತ ಹಾಕಿ ಗೆಲ್ಲಿಸುವುದರ ಮೂಲಕ ದಕ್ಷಿಣ ಕನ್ನಡದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಪಕ್ಷದ ಪ್ರಮುಖರಾದ ಟಿ.ಕೆ. ಸುಧೀರ್, ಶಾಂತಲಾ ಗಟ್ಟಿ, ಜೇಮ್ಸ್ ಪ್ರವೀಣ್, ನೆಲ್ಸನ್ ಮೊಂತೆರೊ, ತನ್ವಿರ್ ಲಿಯಾಕತ್ ಶಾ, ರಮಾನಂದ ಪೂಜಾರಿ, ಕಿರಣ್ ಜೇಮ್ಸ್, ಚಂದ್ರಕಲಾ ರಾವ್, ನೋರ್ಬಟ್ ಡಿಸೋಜಾ, ಯೋಗೇಶ್ ಕುಮಾರ್, ಉದಯ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.
