Mangalore: ಕಾಂಗ್ರೆಸ್ ಅಭ್ಯರ್ಥಿ ರೋಡ್ ಶೋ

Mangalore: ಕಾಂಗ್ರೆಸ್ ಅಭ್ಯರ್ಥಿ ರೋಡ್ ಶೋ


ಮಂಗಳೂರು: ಕಾಂಗ್ರೆಸ್ ರೋಡ್ ಶೋ ಸೋಮವಾರ ಸುರತ್ಕಲ್, ಮುಕ್ಕಾ, ಕೃಷ್ಣಾಪುರ, ಚಿತ್ರಾಪುರ, ಕಾಟಿಪಳ್ಳ, ಚೊಕ್ಕಬೆಟ್ಟು, ಪಣಂಬೂರು, ಕೂಳೂರು, ಕಾವೂರು, ಕುಂಜತ್ತಬೈಲ್ ಮೊದಲಾದ ಪ್ರದೇಶಗಳಲ್ಲಿ ಸಂಚರಿಸಿತು.

ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ನಡೆದ ರೋಡ್ ಶೋನಲ್ಲಿ ಅಭ್ಯರ್ಥಿ ತೆರೆದ ವಾಹನದಲ್ಲಿ ಸಾಗಿದರು. ಕೆಲ ಪ್ರದೇಶಗಳಲ್ಲಿ ತೆರೆದ ವಾಹನದಿಂದ ಇಳಿದು, ನೇರವಾಗಿ ಮತದಾರರ ಬಳಿಗೆ ತೆರಳಿ ಮಾತನಾಡಿಸುತ್ತಿದ್ದರು. ಮತದಾರರು ಮಾತ್ರವಲ್ಲದೇ, ಮಕ್ಕಳು, ಯುವಕರನ್ನು ಮಾತನಾಡಿಸುತ್ತಾ ಸಾಗಿದರು. ಈ ಸಂದರ್ಭ ಮತದಾರರು, ಯುವಕ - ಯುವತಿಯರು ಕೈಕುಲುಕಿ ಶುಭಹಾರೈಸಿದರು. ಇನ್ನೂ ಕೆಲವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಹರ್ಷಿಸಿದರು.

ಧಾರ್ಮಿಕ ಕ್ಷೇತ್ರಗಳ ಭೇಟಿ..:

ಮುಕ್ಕ ಶ್ರೀ ರಾಮ ಮಂದಿರ, ಪಡ್ರೆ ಶ್ರೀ ಧೂಮಾವತಿ ಬಂಟರ ದೈವಸ್ಥಾನ ಭಂಡಾರ ಮನೆ, ಮುಕ್ಕ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನ, ಕಾಟಿಪಳ್ಳ ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನ, ಚಿತ್ರಾಪುರ ಪಣಂಬೂರು ಶ್ರೀ ಮಹಾವಿಷ್ಣು ಭಜನಾ ಮಂದಿರ, ಕುಂಜತ್ತಬೈಲ್ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸದ್ಭಾವನಾ ಸಮಿತಿ ಹಾಗೂ ಮುಕ್ಕ ಜುಮ್ಮಾ ಮಸೀದಿ, ಚೊಕ್ಕಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿಗೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕೆಪಿಸಿಸಿ ಪ್ರ. ಕಾರ್ಯದರ್ಶಿ ಇನಾಯತ್ ಅಲಿ, ಪ್ರತಿಭಾ ಕುಳಾಯಿ, ಪಡ್ರೆ ಶ್ರೀ ಧೂಮಾವತಿ ಬಂಟರ ದೈವಸ್ಥಾನ ಭಂಡಾರ ಮನೆಯ ಗುರಿಕಾರ ದೇವೇಂದ್ರ ಪೂಜಾರಿ, ರಮಾನಾಥ ಅಮೀನ್, ವರುಣ್ ಅಂಚನ್, ಮಹಮ್ಮದ್ ರಂಝಾ, ಸದಾಶಿವ ಜಿ. ಅಮೀನ್, ರಮೇಶ್ ಜಿ. ಅಮೀನ್, ಬೋಜ ಪಾಡಿ, ಮುಕ್ಕ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರವಿರಾಜ್ ಸುವರ್ಣ, ಪುರುಷೋತ್ತಮ ದೇವಾಡಿಗ, ಪಿ.ಜಿ. ಕುಂದರ್, ಸತೀಶ್ ಭಟ್, ಕಾಟಿಪಳ್ಳ ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಚ ಧರ್ಮೇಂದ್ರ ಗಣೇಶಪುರ, ಯಾದವ ಶೆಟ್ಟಿ, ಚಿತ್ರಾಪುರ ಪಣಂಬೂರು ಶ್ರೀ ಮಹಾವಿಷ್ಣು ಭಜನಾ ಮಂದಿರದಲ್ಲಿ ಪಣಂಬೂರು ಮೊಗವೀರ ಮಹಾಸಭಾ ಅಧ್ಯಕ್ಷ ಮಾಧವ ಸುವರ್ಣ  ಪಿ. ದೇವೇಂದ್ರ, ಕೇಶವ ಕಾಂಚನ, ಅಮರನಾಥ ಗುರಿಕ್ಕಾರ, ಪುರುಷೋತ್ತಮ ಕೋಟ್ಯಾನ್, ಹರೀಶ್ ಪುತ್ರನ್, ನಾಗೇಶ್ ಪುತ್ರನ್, ರಮೇಶ್ ಪುತ್ರನ್ ಹಾಗೂ ಮುಕ್ಕ ಜುಮ್ಮಾ ಮಸೀದಿಯ ರಝಾಕ್, ಎಂ.ಸಿ. ಉಮ್ಮರ್ ಫಾರೂಕ್ ಮೊದಲಾದವರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article