Ujire: ನೌಕರರು ಸಂಸ್ಥೆಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು: ಡಿ. ಹರ್ಷೇಂದ್ರ ಕುಮಾರ್
Wednesday, April 17, 2024
ಉಜಿರೆ: ಸಂಸ್ಥೆಯ ನೌಕರರು ಸಂಸ್ಥೆಯ ಎಲ್ಲಾ ಕಾರ್ಯಗಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ. ನೌಕರರು ಎಂದೂ ಅಡಗಿಸಿಕೊಳ್ಳಬಾರದು ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.
ಅವರು ಬುಧವಾರ ಧರ್ಮಸ್ಥಳದಲ್ಲಿರುವ ಶಾಂತಿವನದಲ್ಲಿ ೩೬ ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಚಂದು ನಾಯ್ಕ ಅವರನ್ನು ಸನ್ಮಾನಿಸಿ ಮಾತನಾಡಿ, ನೌಕರರು ಸಂಸ್ಥೆಯ ಧ್ಯೇಯವನ್ನು ಅರಿತು ಕರ್ತವ್ಯ ಪಾಲನೆ ಮಾಡಿದರೆ ಸಂಸ್ಥೆ ಬೆಳೆಯುತ್ತದೆ, ಬೆಳಗುತ್ತದೆ ಎಂದು ಅವರು ಹೇಳಿದರು.
ಎಸ್.ಡಿ.ಎಂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ಶ್ರೀಧರ ಭಟ್ ಅಭಿನಂದನಾ ಭಾಷಣ ಮಾಡಿದರು. ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಡಾ. ಶಶಿಕಾಂತ್ ಜೈನ್ ವಂದಿಸಿ, ಅನನ್ಯಾ ಕಾರ್ಯಕ್ರಮ ನಿರ್ವಹಿಸಿದರು.