Mangalore: ಬ್ರಿಜೇಶ್ ಚೌಟ ಪರವಾಗಿ ಶಾಸಕ ಕಾಮತ್ ಮತಯಾಚನೆ
Thursday, April 18, 2024
ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ, ಉತ್ತರ ಮಹಾಶಕ್ತಿ ಕೇಂದ್ರದ ಉರ್ವಸ್ಟೋರ್ ರಿಕ್ಷಾ ನಿಲ್ದಾಣದಲ್ಲಿ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಪರವಾಗಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ಮತಯಾಚನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಶಾಸಕರು, ಕಳೆದ ಹತ್ತು ವರ್ಷಗಳಲ್ಲಿ ದೇಶ ಸಾಧಿಸಿರುವ ಪ್ರಗತಿಯನ್ನು ಕಂಡು ಮತದಾರ ಪ್ರಭುಗಳು ಮತ್ತೊಮ್ಮೆ ಮೋದಿ ಸರ್ಕಾರವನ್ನು ಅಧಿಕಾರಕ್ಕೇರಿಸಲು ಈಗಾಗಲೇ ನಿರ್ಧರಿಸಿಯಾಗಿದೆ. ಇನ್ನೇನಿದ್ದರೂ ನಮ್ಮ ಅಭ್ಯರ್ಥಿಯ ಗೆಲುವಿನ ಅಂತರವನ್ನು ಹೆಚ್ಚಿಸುವುದಷ್ಟೇ ನಮ್ಮ ಗುರಿ ಎಂದು ಹೇಳಿದರು.
ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಗಣೇಶ್ ಕುಲಾಲ್, ಜಯಲಕ್ಷ್ಮಿ ಶೆಟ್ಟಿ, ಕ್ಯಾ.ಗಣೇಶ್ ಕಾರ್ಣಿಕ್, ರಾಜಗೋಪಾಲ್ ರೈ, ರವಿ ಶಂಕರ್ ಮಿಜಾರ್, ರಮೇಶ್ ಹೆಗ್ಡೆ, ಸಚಿನ್ ರಾಜ್, ರಾಹುಲ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.