Mangalore: ಮೋದಿ ರೋಡ್ ಶೋಗೆ ಕರಾವಳಿ ಸಜ್ಜು
Saturday, April 13, 2024
ಮಂಗಳೂರು: ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಎ.14ರಂದು ಮಂಗಳೂರು ನಗರಕ್ಕೆ ಬಂದು ರೋಡ್ ಶೋ ನಡೆಸಲಿದ್ದು ಸಮಾರೋಪಾದಿಯಲ್ಲಿ ಸಿದ್ಧತೆ ಕೆಲಸಗಳು ನಡೆಯುತ್ತಿದೆ.
ಲೇಡಿಹಿಲ್ ನಾರಾಯಣಗುರು ವೃತ್ತದಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಪ್ರತಿಮೆಯನ್ನು ಶುಕ್ರವಾರ ತೊಳೆದು ಸ್ವಚ್ಛಗೊಳಿಸುವ ಕಾರ್ಯ ನಡೆಯಿತು. ಇದೇ ವೃತ್ತದಿಂದ ರೋಡ್ ಶೋ ಆರಂಭವಾಗುವುದರಿಂದ ಎಸ್‌ಪಿಜಿ ಭದ್ರತಾ ವಿಭಾಗದ ಅಧಿಕಾರಿಗಳು, ಸ್ಥಳೀಯ ಪೊಲೀಸರ ತಂಡ ಸಿದ್ಧತೆಯ ಬಗ್ಗೆ ವಿಶೇಷ ನಿಗಾವಹಿಸಿವೆ.
ಲಾಲ್‌ಬಾಗ್, ಪಿವಿಎಸ್ ವೃತ್ತದ ಮಾರ್ಗವಾಗಿ ನವಭಾರತ ವೃತ್ತದ ವರೆಗೆ ರೋಡ್ ಶೋ ಮಾರ್ಗವನ್ನು ನಿಗದಿಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಈ ವ್ಯಾಪ್ತಿಯಲ್ಲಿರುವ ಎಲ್ಲ ಕಟ್ಟಡಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಪ್ರತಿ ಕಟ್ಟಡ, ವಸತಿ ಸಮುಚ್ಛಯಕ್ಕೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳು, ಉದ್ಯೋಗದಲ್ಲಿರುವವರ ಗುರುತುಪತ್ರ, ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ. ಮಾರ್ಗದುದ್ದಕ್ಕೂ ಬ್ಯಾರಿಕೇಡ್ ಅಳವಡಿಸಲಾಗಿದೆ.
