Mangalore: ಬ್ರಿಜೇಶ್ ಚೌಟರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ
Sunday, April 14, 2024
ಮಂಗಳೂರು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಭಾರತೀಯ ಜನತಾ ಪಾರ್ಟಿ ಚುನಾವಣಾ ಕಾರ್ಯಾಲಯದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಬಳಿಕ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದ ಆವರಣದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾದ ವತಿಯಿಂದ ಆಯೋಜಿಸಲಾದ ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.



