Mangalore: ಬೊಂಡ ಫ್ಯಾಕ್ಟರಿ ನೀರು ಸೇವಿಸಿ ಅಸ್ವಸ್ಥ ಪ್ರಕರಣ-ಎಳನೀರಿನಲ್ಲಿ ಯಾವುದೇ ಕಲಬೆರಕೆಯಾಗಿಲ್ಲ

Mangalore: ಬೊಂಡ ಫ್ಯಾಕ್ಟರಿ ನೀರು ಸೇವಿಸಿ ಅಸ್ವಸ್ಥ ಪ್ರಕರಣ-ಎಳನೀರಿನಲ್ಲಿ ಯಾವುದೇ ಕಲಬೆರಕೆಯಾಗಿಲ್ಲ


ಮಂಗಳೂರು: ನಗರದ ಅಡ್ಯಾರ್ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಹಲವರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈಸೇರಿದೆ. ಎಳನೀರು ಸಹಜವಾಗಿತ್ತು. ಕಲಬೆರಕೆಯಾಗಿಲ್ಲ ಎಂಬುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.

ಎ.9ರಂದು ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ 138 ಮಂದಿ ವಾಂತಿಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಪ್ರಕರಣದ ಗಂಭೀರತೆಯನ್ನು ಅರಿತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆದರೆ ಘಟನೆ ನಡೆದ ಎರಡು ದಿನಗಳ ಬಳಿಕದ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರು ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. 

ಪ್ರಯೋಗಾಲಯ ಪರೀಕ್ಷೆಯ ವರದಿ ಎ.22 ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ. ಜೊತೆಗೆ ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿಯ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ ತಿಳಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article