Moodubidire: ಮಂಗಳೂರಿನ ವೈಭವ ಮರುಕಳಿಸಲು ಕಾಂಗ್ರೆಸ್ ಗೆಲ್ಲಿಸಿ: ಪದ್ಮರಾಜ್ ಆರ್. ಪೂಜಾರಿ

Moodubidire: ಮಂಗಳೂರಿನ ವೈಭವ ಮರುಕಳಿಸಲು ಕಾಂಗ್ರೆಸ್ ಗೆಲ್ಲಿಸಿ: ಪದ್ಮರಾಜ್ ಆರ್. ಪೂಜಾರಿ


ಮೂಡುಬಿದರೆ: ಕಾಂಗ್ರೆಸ್ ಯಾವತ್ತೂ ಜಾತಿ, ಧರ್ಮದ ವಿಚಾರದಲ್ಲಿ ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರವಾಗಿ ಮಾತ್ರ ಚುನಾವಣೆ ಎದುರಿಸಿ, ಉತ್ತಮ ಆಡಳಿತವನ್ನು ನೀಡಿದೆ. ನಮ್ಮ ಭವಿಷ್ಯ, ಮಕ್ಕಳ ಜೀವನವನ್ನು ನಿರ್ಧರಿಸುವ ಚುನಾವಣೆ ಮತ್ತೊಮ್ಮೆ ಬಂದಿದೆ. ವೈಭವದಿಂದ ಮೆರೆಯುತ್ತಿದ್ದ ಮಂಗಳೂರನ್ನು ಮತ್ತೆ ಅದೇ ವೈಭವಕ್ಕೆ ಕೊಂಡೊಯ್ಯುವ ಅಗತ್ಯವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತೋಡಾರಿನಲ್ಲಿ ಭಾನುವಾರ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ನಾನು ಶಾಸಕನಾಗಿದ್ದಾಗಲೇ ಹೊಸಬರಿಗೆ ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದೆ. ಇದೀಗ ಯುವಕನಿಗೆ, ವಕೀಲನಿಗೆ ಅವಕಾಶ ನೀಡಲಾಗಿದೆ. ಸಮರ್ಥ ಅಭ್ಯರ್ಥಿ ಮಾತ್ರವಲ್ಲ, ನಾವು ಗೌರವಿಸುವಂತಹ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ. ಅವರನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ಮಿಥುನ್ ರೈ ಮಾತನಾಡಿ, ಹಿಂದುಳಿದ ವರ್ಗದ ಧ್ವನಿಯಾಗಿರುವ ಪದ್ಮರಾಜ್ ಆರ್. ಪೂಜಾರಿ ಅವರ ಗೆಲುವಿಗಾಗಿ ಈಗ ನಾವೆಲ್ಲಾ ಧ್ವನಿಯಾಗಬೇಕು ಎಂದು ಹೇಳಿದರು.

ಜಿಲ್ಲಾ ವಕ್ಫ್ ಅಧ್ಯಕ್ಷ ಅಬ್ದುಲ್ ಸಲಾಂ ತೋಡಾರ್, ರಾಜೇಶ್ ಅಡ್ಲಕೆರೆ, ಚಂದ್ರಹಾಸ್ ಸಾಧು ಸನಿಲ್, ಮೂಡುಬಿದರೆ ಉಸ್ತುವಾರಿ, ಗುರುರಾಜ್, ಬ್ಲಾಕ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ನಜೀರ್, ಇಸಾಕ್ ಹಾಜಿ, ಲತೀಫ್, ಆಸೀಫ್ ಮತ್ತಿತರರು ಉಪಸ್ಥಿತರಿದ್ದರು.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article