Padubidire: ಪಡುಬಿದ್ರಿ ಕಾರ್ಕಳ ಜಂಕ್ಷನ್ ನಲ್ಲಿ ಕಾರಿಗೆ ಡಿಕ್ಕಿ ಹೊಡೆದು ಡಿವೈಡರ್ ಏರಿ ನಿಂತ ಸರಕು ಸಾಗಾಣಿಕೆ ಲಾರಿ-ಸಂಚಾರ ತೊಡಕು
Saturday, April 27, 2024
ಪಡುಬಿದ್ರಿ: ಉಡುಪಿಯಿಂದ ಮಂಗಳೂರು ಕಡೆಗೆ ಸರಕು ಹೇರಿಕೊಂಡು ಸಂಚರಿಸುತ್ತಿದ್ದ ಲಾರಿಯೊಂದು ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಕಾರ್ಕಳ ಕಡೆಯಿಂದ ಕಾರಿಗೆ ಡಿಕ್ಕಿ ಹೊಡೆದು ಡಿವೈಡರ್ ಏರಿ ನಿಂತ ಘಟನೆ ಸಂಭವಿಸಿದೆ. ಕಾರಿನಲ್ಲಿ ಆರು ಮಹಿಳಾ ಪ್ರಯಾಣಿಕರು ಇದ್ದರು. ಅಪಘಾತದಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ. ಕಾರು ನುಜ್ಜುಗುಜ್ಜಾಗಿದೆ.
ಪ್ರಕರಣ ಪಡುಬಿದ್ರಿ ಠಾಣೆಯಲ್ಲಿ ದಾಖಲಾಗಿದೆ.