Putturu: ಮತ ಚಲಾಯಿಸಿ ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ
Saturday, April 27, 2024
ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಬೂತ್ ನಲ್ಲಿ ವ್ಯಕ್ತಿಯೊಬ್ಬರು ತಾನು ಓಟು ಮಾಡಿದ ನಂತದ ಅದನ್ನು ಮೊಬೈಲ್‌ನಲ್ಲಿ ಕ್ಲಿಕ್ಕಿಸಿ ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಮತಕೇಂದ್ರದಲ್ಲಿ ಮೊಬೈಲ್ ಬಳಕೆಗೆ ನಿಷೇಧವಿದ್ದು, ಮತದಾರರನ್ನು ಶಾಲಾ ಆವರಣದೊಳಗೆ ಮೊಬೈಲ್ ತರಲು ಅಧಿಕಾರಿಗಳು ಅವಕಾಶ ನೀಡಿರಲಿಲ್ಲ. ಹಾಗಿದ್ದಾಗ ಸಂಪ್ಯ ಮತಗಟ್ಟೆಯಲ್ಲಿ ಮೊಬೈಲ್ ಬಳಕೆ ಆಗಿರುವುದು ಹೇಗೆ ಎಂಬ ಪ್ರಶ್ನೆ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಫೊಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದು ನಿಯಮದ ಉಲ್ಲಂಘನೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.