Surathkal: ಚೊಂಬು ತೋರಿಸಿ ಪ್ರತಿಭಟನೆ
Monday, April 22, 2024
ಸುರತ್ಕಲ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕೃಷ್ಣಾಪುರ ೪ನೇ ವಾರ್ಡನಲ್ಲಿ ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಮತಯಾಚನೆ ನಡೆಸಿದರು.
ಈ ಸಂಧರ್ಭದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಾಡಿರುವ ಅನ್ಯಾಯವನ್ನು ಖಂಡಿಸಿ ಚೊಂಬು ಪ್ರದರ್ಶಿಸಿ ಪ್ರತಿಭಟಿಸಲಾಯಿತು.
ಬಳಿಕ ಮಾತಾಡಿದ ಇನಾಯತ್ ಅಲಿ ಅವರು, ‘ಕೇಂದ್ರದಲ್ಲಿ ಆಳ್ವಿಕೆ ಮಾಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರಕಾರ ರಾಜ್ಯಕ್ಕೆ ದ್ರೋಹವೆಸಗುತ್ತಾ ಬಂದಿದೆ. ನೆರೆ ಬಂದಾಗ ಕೊರೋನಾ ಬಂದಾಗ ಜನರಿಗೆ ನೆರವಾಗದೆ ರಾಜ್ಯದ ಜಿಎಸ್‌ಟಿ ಪಾಲನ್ನೂ ನೀಡದೆ ಸತಾಯಿಸುತ್ತಿರುವ ಕೇಂದ್ರ ಸರಕಾರ ಜನರಿಗೆ ಚೊಂಬು ನೀಡಿದೆ. ಇದೇ ಅದರ ಬಹುದೊಡ್ಡ ಸಾಧನೆಯಾಗಿದೆ ಎಂದು ಹೇಳಿದರು.
ಬ್ಲಾಕ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.