Udupi: ಸಂವಿಧಾನಿಕವಾಗಿ ಮತದಾನದ ಹಕ್ಕನ್ನು ಪ್ರತಿಯೊಬ್ಬರು ತಪ್ಪದೇ ಚಲಾಯಿಸಬೇಕು: ಡಾ. ಕೆ. ವಿದ್ಯಾಕುಮಾರಿ

Udupi: ಸಂವಿಧಾನಿಕವಾಗಿ ಮತದಾನದ ಹಕ್ಕನ್ನು ಪ್ರತಿಯೊಬ್ಬರು ತಪ್ಪದೇ ಚಲಾಯಿಸಬೇಕು: ಡಾ. ಕೆ. ವಿದ್ಯಾಕುಮಾರಿ


ಉಡುಪಿ: ಸಾಂವಿಧಾನಿಕವಾಗಿ ನೀಡಿರುವ ಅಮೂಲ್ಯವಾದ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಚಲಾಯಿಸುವ ಮೂಲಕ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಜಾಪ್ರಭುತ್ವವನ್ನು ಮತ್ತಷ್ಟು ದೃಢಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚಿಸಿದರು.

ಅಜ್ಜರಕಾಡು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚುನಾವಣಾ ಸಾಕ್ಷರತಾ ಸಂಘ, ರೆಡ್‌ಕ್ರಾಸ್ ಘಟಕ, ಆಂತರಿಕ ಗುಣಮಟ್ಟ ಭರವಸ ಕೋಶ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಉಡುಪಿ ಸಂಯುಕ್ತ ಆಶ್ರಯದಲ್ಲಿ ನಡೆದ ಮತದಾನದ ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯ ನಮ್ಮ ದೇಶದಲ್ಲಿ ಸರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಂವಿಧಾನ ಎಲ್ಲರಿಗೂ ಅವಕಾಶ ಒದಗಿಸಿದೆ. ಯಾರೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಸಕ್ತಿ ತೋರದೇ ಉತ್ಸಾಹದಿಂದ ಭಾಗವಹಿಸಿ ಯಾವುದೇ ಆಸೆ ಅಮಿಷೆ, ಪ್ರಚೋದನೆಗಳಿಗೆ ಒಳಗಾಗದೆ ವಿವೇಚನೆ ಬಳಸಿ ಏಪ್ರಿಲ್ 26 ಹಾಗೂ ಮೇ 7ರಂದು ತಪ್ಪದೇ ಮತ ಚಲಾಯಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದಲ್ಲಿ ಮತದಾನ ಮಾಡಲು ಕೆಲವು ವಿದ್ಯಾವಂತರೇ ಮುಂದೆಬರುತ್ತಿಲ್ಲ. ಇದು ತಪ್ಪು, ಮೂಲಭೂತ ಹಕ್ಕಿನಂತೆ ದೊರೆತಿರುವ ಮತದಾನದ ಹಕ್ಕನ್ನೂ ಪ್ರತಿಯೊಬ್ಬರು ಚಲಾಯಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮತದಾನ ಪ್ರಮಾಣ ವಚನ ಬೋಧಿಸಿದರು. ನಂತರ ಮತದಾರರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಲಿಂಗಪ್ಪ ಡಾ. ಜಿ. ಶಂಕರ್ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೊತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ ಎಸ್, ಪೌರಾಯುಕ್ತ ರಾಯಪ್ಪ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ ಮೊದಲಾದವರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article