Udupi: ಅಂಬೇಡ್ಕರ್ ಜಯಂತಿ ಆಚರಣೆ
Sunday, April 14, 2024
ಉಡುಪಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯನ್ನು ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಭಾನುವಾರ ಮಣಿಪಾಲದ ರಜತಾದ್ರಿ ಆವರಣದಲ್ಲಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಸಮಾಜ ಕಲ್ಯಾಣ ಇಲಾಖಾಧಿಕಾರಿ ಅನಿತಾ ಮಡ್ಲೂರ್, ವಿವಿಧ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಇದೇ ಸಂದರ್ಭದಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ಹಾಸ್ಟೆಲ್ ವಿದ್ಯಾರ್ಥಿಗಳಾದ ಕೆ. ಜಯಂತಿ, ನರಸಪ್ಪ, ಪ್ರೀತಿ, ಮಹಾಂತೇಶ್ ಚವಾಣ್, ಮಾರುತಮ್ಮ, ಮಾಣಿಕ್ಯಮ್ಮ ಮತ್ತು ಜಯರಾಜ್ ಅವರನ್ನು ಸನ್ಮಾನಿಸಲಾಯಿತು