Udupi: ಮಾಸ್ತಿ ಅಮ್ಮ ದೇವಸ್ಥಾನದಲ್ಲಿವಿಶೇಷ ಅಲಂಕಾರ
Tuesday, April 9, 2024
ಉಡುಪಿ: ಚಾಂದ್ರಮಾನ ಯುಗಾದಿ ಹಬ್ಬದ ಪ್ರಯುಕ್ತ ಉಡುಪಿ -ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ ಪೂಜೆ ಮಾಡಲಾಯಿತು.
ವಿಶೇಷ ಹೂವಿನ ಅಲಂಕಾರ ಪೂಜೆ, ಮಧ್ಯಾಹ್ನ ಮಹಾ ಮಂಗಳಾರತಿಯನ್ನು ದೇವಸ್ಥಾನದ ಅರ್ಚಕ ರಾಮಚಂದ್ರ ಗಾಂವಸ್ಕರ್ ನೆರವೇರಿಸಿದರು. ನೂರಾರು ಭಕ್ತರು ಅಮ್ಮನವರಿಗೆ ಪ್ರಿಯವಾದ ಮಲ್ಲಿಗೆ ಹೂವನ್ನು ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.


