Ujire: ‘ಅಮ್ಮನ ಕತೆಗಳು’ ಪುಸ್ತಕ ಬಿಡುಗಡೆ
Thursday, April 11, 2024
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಇವರು ಬರೆದ ‘ಅಮ್ಮನ ಕತೆಗಳು’ ಕಥಾಸಂಕಲನದ ಬಿಡುಗಡೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ನೆರವೇರಿಸಿದರು.
ಎಸ್.ಡಿ.ಎಂ. ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರು ಉಪನ್ಯಾಸಕರು ತಮ್ಮ ಶೈಕ್ಷಣಿಕ ಜವಾಬ್ದಾರಿಗಳನ್ನು ನಿಭಾಯಿಸಿಕೊಂಡು ಬಿಡುವಿನ ಸಮಯವನ್ನು ಔಚಿತ್ಯಪೂರ್ಣವಾಗಿ ಬಳಸಿ ಸದಭಿರುಚಿಯ ಹವ್ಯಾಸಗಳನ್ನು ಬೆಳೆಸಿಕೊಂಡಿರುವುದನ್ನು ಗುರುತಿಸಿ ಪ್ರಶಂಸಿದರು.
ಕೃತಿಕರ್ತ ಡಾ. ಸುಬ್ರಹ್ಮಣ್ಯ ಭಟ್, ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ್ ಕುಮಾರ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗ ಮುಖ್ಯಸ್ಥೆ ವೀಣಾ ಭಟ್, ಸಹಪ್ರಾಧ್ಯಾಪಕ ಡಾ. ಅಂತೀಶ್ ಆರ್., ಎಲೆಕ್ಟ್ರಿಕಲ್ ವಿಭಾಗದ ಉಪಪ್ರಾಧ್ಯಾಪಕ ಡಾ. ಸತ್ಯನಾರಾಯಣ ಪಿ. ಉಪಸ್ಥಿತರಿದ್ದರು.