Vitla: ಬಾವಿಗೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಕೊರತೆಯಿಂದ ಇಬ್ಬರು ಮೃತ್ಯು
Wednesday, April 24, 2024
ವಿಟ್ಲ: ವಿಟ್ಲಕ್ಕೆ ಸನಿಹದ ಕೇಪು ಎಂಬಲ್ಲಿ ಬಾವಿಗೆ ರಿಂಗ್ ಹಾಕುವ ಸಂದರ್ಭದಲ್ಲಿ ಆಕ್ಸಿಜನ್ ಸಿಗದೆ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ಸಂಭವಿಸಿದೆ.
ಮೃತ ಕಾರ್ಮಿಕರನ್ನು ವಿಟ್ಲಕ್ಕೆ ಸನಿಹದ ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿನಲ್ಲಿ ವಾಸವಿರುವ ಇಬ್ರಾಹಿಂ (40) ಹಾಗೂ ಮಲಾರ್ ನಿವಾಸಿ ಅಲಿ (24) ಗುರುತಿಸಲಾಗಿದೆ.
ಸುಮಾರು 30 ಫೀಟ್ ಆಳದ ಬಾವಿಗೆ ರಿಂಗ್ ಹಾಕಿದ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು ಮೇಲಕ್ಕೆ ಬಾರದೇ ಇದ್ದಾಗ ಅವನನ್ನು ನೋಡಲು ಇನ್ನೊಬ್ಬ ಕಾರ್ಮಿಕ ಇಳಿದಿದ್ದು ಇಬ್ಬರೂ ಆಕ್ಸಿಜನ್ ಸಿಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.