Bangalore: ನಾಳೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
Sunday, May 5, 2024
ಬೆಂಗಳೂರು: ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಸೇರಿದಂತೆ ಪ್ರತ್ಯೇಕ ಸ್ಥಳಗಳಲ್ಲಿ ಮೇ ೬ರಂದು ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.