Bantwal: ಉತ್ತರ ಕನ್ನಡಕ್ಕೆ ಉಸ್ತುವಾರಿಯಾಗಿ ರೈ
Wednesday, May 1, 2024
ಬಂಟ್ವಾಳ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿರುವ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮನಾಥ ರೈ ಅವರು ಕಾರವಾರದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಾಲಯಕ್ಕೆ ಭೇಟಿ ನೀಡಿ ಪ್ರಚಾರ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು.
ಬಳಿಕ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಅಂಜಲಿ ಹೇಮಂತ್ ನಿಂಬಾಳ್ಕರ್ ಜೊತೆ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್, ಜಿಲ್ಲಾ ಪ್ರ.ಕಾರ್ಯದರ್ಶಿ ಶಬೀರ್ ಸಿದ್ದಕಟ್ಟೆ ಹಾಗೂ ಉ.ಕ. ಜಿಲ್ಲೆಯ ಪಕ್ಷದ ಮುಖಂಡರು ಉಪಸ್ಥಿತರಿದ್ದರು.