Chikkamagaluru: ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂನ್ 3 ರಂದು ಚುನಾವಣೆ
Sunday, May 5, 2024
ಚಿಕ್ಕಮಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3 ರಂದು ಚುನಾವಣೆ ನಡೆಯಲಿದೆ.
ಮೇ.9 ರಂದು ಚುನಾವಣೆ ಅಧಿಸೂಚನೆ ಪ್ರಕಟ, ಮೇ.16 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ, ಮೇ 17 ನಾಮಪತ್ರಗಳ ಪರಿಶೀಲನೆ, ಮೇ.20 ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾವಾಗಿರುತ್ತದೆ. ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ. ಜೂ.6 ರಂದು ಮತಗಳ ಏಣಿಕೆ ನಡೆಯಲಿದ್ದು, ಜೂನ್ 12 ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.