
Karkala: ಲೈಂಗಿಕ ಕಿರುಕುಳ-ಗ್ರಾ.ಪಂ. ಸದಸ್ಯ ಸೆರೆ
Thursday, May 30, 2024
ಕಾರ್ಕಳ: ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಕಲ್ಯಾ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಪುತ್ರನ್‌ನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ದಲಿತ ಸಮುದಾಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಹಿನ್ನೆಲೆ ಆರೋಪಿಯ ವಿರುದ್ಧ ಮೇ 28ರಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕೋ ಮತ್ತು ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೇ 29ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ಆರೋಪಿ ಸಂತೋಷ್ ಪುತ್ರನಿಗೆ ನ್ಯಾಯಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.