Mangalore: ಮೇ.30 ಶಕ್ತಿ ಪೂರ್ವ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಣೆ-ಡಾ. ಶಶಿಕಿರಣ್ ಶೆಟ್ಟಿ ಶಿಷ್ಯ ವೇತನ ಬಿಡುಗಡೆ ಕಾರ್ಯಕ್ರಮ
Wednesday, May 29, 2024
ಮಂಗಳೂರು: ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಮೇ.30 ರಂದು ಬೆಳಗ್ಗೆ 10 ಗಂಟೆಗೆ ಡಾ. ಶಶಿಕಿರಣ್ ಶೆಟ್ಟಿ ಶಿಷ್ಯ ವೇತನವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಬಿ.ಎಲ್. ಧರ್ಮ ಅವರು ಬಿಡುಗಡೆಗೊಳಿಸಲಿದ್ದಾರೆ ಹಾಗೂ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಜ್ಞಾನ ಸುಧಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಸಂಜೀತ್ ನಾಕ್ ವಹಿಸಲಿರುತ್ತಾರೆ. ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಡಾ. ಕೆ.ಸಿ ನಾಕ್, ಟ್ರಸ್ಟಿ ಸಗುಣ ಸಿ. ನಾಕ್, ಡಾ. ಶಶಿಕಿರಣ್ ಶೆಟ್ಟಿ ಅವರ ತಾಯಿ ಸುಶೀಲ ಶೆಟ್ಟಿ, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಹೆಚ್, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.