Mangalore: ಮೇ.5 ರಂದು ನೀಟ್ ಪರೀಕ್ಷೆಗೆ ನಿಷೇಧಾಜ್ಞೆ

Mangalore: ಮೇ.5 ರಂದು ನೀಟ್ ಪರೀಕ್ಷೆಗೆ ನಿಷೇಧಾಜ್ಞೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮೇ 5ರಂದು 18 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ನೀಟ್ ಪರೀಕ್ಷೆಯ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಸಂದರ್ಭ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆ ಯನ್ನು ಸುಸೂತ್ರವಾಗಿ ಪಾರದರ್ಶಕವಾಗಿ ಮತ್ತು ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಯೂ ಆಗಿರುವ ಉಪ ಪೋಲಿಸ್ ಆಯುಕ್ತ ಸಿದ್ದಾರ್ಥ ಗೋಯಲ್ ಆದೇಶಿಸಿದ್ದಾರೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ 1 ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್, ದೂರವಾಣಿ, ಬ್ಲೂಟೂತ್ ಹಾಗೂ ಪೇಜರ್ ಇತ್ಯಾದಿ ಇಲೆಕ್ಟ್ರಾನಿಕ್ಸ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article