Mangalore: ವೇದವ್ಯಾಸ ಕಾಮತ್ ಅವರಿಂದ ಮತಯಾಚನೆ
Wednesday, May 1, 2024
ಮಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಹಾಗೂ ಸಿದ್ದಾಪುರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ರವರ ಪರ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಮತಯಾಚನೆ ನಡೆಸಿದರು.
ನಂತರ ಮಾತನಾಡಿದ ಶಾಸಕರು, ಈಗಾಗಲೇ ಕ್ಷೇತ್ರದೆಲ್ಲೆಡೆ ಬಿಜೆಪಿ ಪರ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಮತ್ತೊಮ್ಮೆ ಇಲ್ಲಿ ಬಿಜೆಪಿಯ ಗೆಲುವು ನಿಶ್ಚಿತವಾಗಿದೆ. ಇನ್ನು ಉಳಿದಿರುವ ಕೆಲವೇ ದಿನಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಭಾರೀ ಬಹುಮತದಿಂದ ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರನ್ನು ಮೂರನೇ ಬಾರಿ ದೇಶದ ಪ್ರಧಾನಿಯಾಗಿಸುವ ಸಂಕಲ್ಪ ಕೈಗೊಳ್ಳೋಣ ಎಂದು ಕರೆ ನೀಡಿದರು.
ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಸೇರಿದಂತೆ ಹಲವು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.


