Mangalore: ಪೆನ್‌ಡ್ರೈವ್ ಪ್ರಕರಣ-ಸಿಬಿಐ ತನಿಖೆ ನಡೆಸಿ: ಕೆ.ಎಸ್. ಈಶ್ವರಪ್ಪ

Mangalore: ಪೆನ್‌ಡ್ರೈವ್ ಪ್ರಕರಣ-ಸಿಬಿಐ ತನಿಖೆ ನಡೆಸಿ: ಕೆ.ಎಸ್. ಈಶ್ವರಪ್ಪ

ಮಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಎಸ್‌ಐಟಿ ತನಿಖೆಯಿಂದ ನಿಷ್ಪಕ್ಷಪಾತ ನಡೆಸಲು ಸಾಧ್ಯವಿಲ್ಲ. ಏನಿದ್ದರೂ ಸರ್ಕಾರದ ನೇರಕ್ಕೆ ವರದಿ ಕೊಡಬಹುದು. ಸಿಬಿಐಗೆ ತನಿಖೆ ವಹಿಸಿದ್ದರೆ ಕ್ಷಣದಲ್ಲಿ ವಿದೇಶದಿಂದ ಪ್ರಜ್ವಲ್ನನ್ನು ಭಾರತಕ್ಕೆ ಕರೆತರುತ್ತಿದ್ದರು. ಈ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡು ಹೆಣ್ಮಕ್ಕಳ ಮಾನಹರಾಜು ಮಾಡಲಾಗಿದೆ. ಪರಿಷತ್ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಮತ ಚಲಾಯಿಸುತ್ತಾರೆ ಎಂದರು.

ಸಚಿವರ ರಾಜಿನಾಮೆ ಪಡೆಯಲಿ..:

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆ ಸಚಿವರ ತಲೆದಂಡ ಪಡೆಯಬೇಕು. ಗುತ್ತಿಗೆದಾರ ಆತ್ಮಹತ್ಯೆ ವಿಚಾರದಲ್ಲಿ ನಾನು ಕೂಡ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದೇನೆ. ಆಗ ನನ್ನ ರಾಜಿನಾಮೆಗೆ ಒತ್ತಾಯಿಸಿದ ಕಾಂಗ್ರೆಸಿಗರು ಈಗ ಯಾಕೆ ಮೌನವಾಗಿದ್ದಾರೆ. ಈ ವಿಚಾರದಲ್ಲಿ ಸಿಎಂ ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article