Mangalore: ರಸ್ತೆಯಲ್ಲಿ ನಮಾಜ್-ಸುಮೊಟೊ ಪ್ರಕರಣ ದಾಖಲು
Tuesday, May 28, 2024
ಮಂಗಳೂರು: ನಗರದ ಕಂಕನಾಡಿಯಲ್ಲಿನ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಸಾಮೂಹಿಕ ನಮಾಜ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಲಾಗಿದೆ.
ನಮಾಜ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಈ ಕುರಿತು ಪರಿಶೀಲನೆ ನಡೆಸಿದ ನಂತರ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಓಡಾಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡೆ ತಡೆಯನ್ನುಂಟು ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಲಂ 341, 283, 143 ಜತೆಗೆ 149 ಐಪಿಸಿಯಂತೆ ಸುಮೊಟೊ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.