
Mangalore: ವಸಂತ ಬಂಗೇರ ಅವರ ನಿಧನಕ್ಕೆ ಪದ್ಮರಾಜ್ ಸಂತಾಪ
Wednesday, May 8, 2024
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ, ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ, ಕಾಂಗ್ರೆಸ್ ಮುಖಂಡ, ನನ್ನ ಮಾಗದರ್ಶಕರು, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ. ವಸಂತ ಬಂಗೇರ ನಿಧನ ಸುದ್ದಿ ನೋವು ತಂದಿದೆ ಎಂದು ದ.ಕ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸಂತಾಪ ಸೂಚಿಸಿದ್ದಾರೆ.
ದ.ಕ ಜಿಲ್ಲೆಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅವರ ಕೊಡುಗೆ ಅಪಾರ. ಮೊನ್ನೆ ಮೊನ್ನೆಯವರೆಗೂ ತಮ್ಮ ಪರವಾಗಿ ಚುನಾವಣಾ ಪ್ರಚಾರಕ್ಕೆ ಮಾರ್ಗದರ್ಶನ ಮಾಡುತ್ತಾ, ಕಾಂಗ್ರೆಸ್ ಕಾರ್ಯಕರ್ತರನ್ನು ಹುರಿದುಂಬಿಸುತ್ತಿದ್ದರು. ವಸಂತ ಬಂಗೇರ ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಬಡವಾಗಿದೆ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಪದ್ಮರಾಜ್ ಆರ್. ಪೂಜಾರಿ ಸಂತಾಪ ಸೂಚಿಸಿದ್ದಾರೆ.