Mangalore: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Mangalore: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ


ಮಂಗಳೂರು: ಉಗ್ರ ಸಂಘಟನೆಯ ಹೆಸರಲ್ಲಿ ಇಮೇಲ್ ಮೂಲಕ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. 

ಈ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಏರ್‌ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ ಎಂದು ತಿಳಿದು ಬಂದಿದೆ. ಎಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ಬಂದಿದ್ದು, ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article