Mangalore: ಸ್ಕಿಜೋಫ್ರೇನಿಯಾ ಕಾಯಿಲೆ ಬಗ್ಗೆ ಆಂತಕ ಬೇಡ: ಡಾ. ಹೆಚ್.ಆರ್ ತಿಮ್ಮಯ್ಯ

Mangalore: ಸ್ಕಿಜೋಫ್ರೇನಿಯಾ ಕಾಯಿಲೆ ಬಗ್ಗೆ ಆಂತಕ ಬೇಡ: ಡಾ. ಹೆಚ್.ಆರ್ ತಿಮ್ಮಯ್ಯ


ಮಂಗಳೂರು: ಸ್ಕಿಜೋಫ್ರೇನಿಯಾ ಕಾಯಿಲೆ ಬಗ್ಗೆ ಆಂತಕ ಬೇಡ ಸೂಕ್ತ ಚಿಕಿತ್ಸೆಯಿಂದ ಸಹಜ ಜೀವನ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ  ಡಾ. ಹೆಚ್.ಆರ್ ತಿಮ್ಮಯ್ಯ ಹೇಳಿದರು.

ಅವರು ಇಂದು ಕುಂಟಿಕಾನದಲ್ಲಿರುವ ಎ.ಜೆ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ  ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದ ದಯಾಳುತನದ ಶಕ್ತಿಯ ಆಚರಣೆ ಈ ವರ್ಷದ ಧ್ಯೇಯ ವಾಕ್ಯವಾಗಿದ್ದು, ಅದರಂತೆ ಮಾನಸಿಕ ಅಸ್ವಸ್ಥೆಯನ್ನು ಮೊದಲ ಹಂತದಲ್ಲಿ ಗುರುತಿಸಿ ಸಮಾಜದಲ್ಲಿ ಅವರನ್ನು ಕಡೆಗಣಿಸಬಾರದು ಎಂದರು

ಅಧ್ಯಕ್ಷತೆ ವಹಿಸಿದ್ದ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಡೀನ್ ಡಾ. ಅಶೋಕ್ ಹೆಗ್ಡೆ ಮಾತನಾಡಿ, ಉತ್ತಮ ಆರೋಗ್ಯವಂತ ವ್ಯಕ್ತಿಯೆಂದರೆ ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕ ಹಾಗೂ ನೈತಿಕವಾಗಿ ಸದೃಢವಾಗಿದ್ದಲ್ಲಿ ಮಾತ್ರ ಅವರು ಆರೋಗ್ಯವಂತ ಎಂದು ಗುರುತಿಸುತ್ತದೆ. ವ್ಯಕ್ತಿ ಯಾವುದೇ ಒಂದು ಸಮಸ್ಯೆಯಿಂದ ಬಳಲುತ್ತಿದ್ದರೂ ಸಮಾಜ ಅವರನ್ನು ಅಸ್ವಸ್ಥ ವ್ಯಕ್ತಿ ಎಂದು ಗುರುತ್ತಿಸುತ್ತದೆ. ಈ ಹಿನ್ನಲೆಯಲ್ಲಿ ಮಾನಸಿಕ ರೋಗ್ಯದ ಕಡೆಗೆ ಹೆಚ್ಚಿನ ಕಾಳಜಿವಹಿಸಿ ಉತ್ತಮವಾದ ಆರೋಗ್ಯವಂತ ಸಮಾಜದ ಕಡೆಗೆ ಗಮನ ಹರಿಸೋಣ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮನೋರೋಗ ವಿಭಾಗದ ಡಾ. ಅರುಣಾ ಯಡಿಯಾಳ್ ವಿಶ್ವ ಸ್ಕಿಜೋಫ್ರೇನಿಯಾ ದಿನದ ಬಗ್ಗೆ ಮಾಹಿತಿ ನೀಡಿದರು. 

ವಿದ್ಯಾರ್ಥಿಗಳಿಗೆ ಕಿರುಚಿತ್ರ ಹಾಗೂ ಪೋಸ್ಟರ್ ಮೇಕಿಂಗ್ ಸ್ಪರ್ಧೆ ಹಮ್ಮಿಕೊಂಡಿದ್ದು, ಅದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು

ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು   ಡಾ. ಜೆಸಿಂತಾ, ಸರಕಾರಿ ಲೇಡಿಗೋಶನ್ ಆಸ್ಪತ್ರೆಯ  ವೈದ್ಯಕೀಯ ಅಧೀಕ್ಷಕರು ಡಾ. ದುರ್ಗಪ್ರಸಾದ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಸುದರ್ಶನ್, ಜಿಲ್ಲಾ ರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article