
Mangalore: ಸ್ಪೀಕರ್ ಯು.ಟಿ. ಖಾದರ್ ಬಂಗೇರಾ ಅವರ ನಿಧನಕ್ಕೆ ಸಂತಾಪ
ಮಂಗಳೂರು: ನಾಡಿನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರವನ್ನು ಐದು ಬಾರಿ ಕರ್ನಾಟಕ ವಿಧಾನ ಸಭೆಯಲ್ಲಿ ಪ್ರತಿನಿಧಿಸಿದ್ದ ರಾಜ್ಯದ ಹಿರಿಯ ರಾಜಕಾರಣಿ ಹಾಗೂ ನನ್ನ ಆತ್ಮೀಯ ಸ್ನೇಹಿತರಾದ ಕೆ. ವಸಂತ ಬಂಗೇರ ಅವರ ನಿಧನದ ವಾರ್ತೆಯನ್ನು ತಿಳಿದು ಅತೀವ ದುಃಖವಾಗಿದೆ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಸಂತಾಪ ಸೂಚಿಸಿದ್ದಾರೆ.
ಕೆ. ವಸಂತ ಬಂಗೇರಾ ಅವರು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವೆಗೆ ತಮ್ಮ ಜೀವನವನ್ನು ತೊಡಗಿಸಿಕೊಂಡು ಅಪಾರ ಸೇವೆ ಸಲ್ಲಿಸಿ ತಮ್ಮದೇ ಆದ ಛಾಪನ್ನು ಮೂಡಿಸಿರುತ್ತಾರೆ. ಮೃತರು 1994-1999 ರ ಅವಧಿಯಲ್ಲಿ ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿರುತ್ತಾರೆ.
ಮೃತರ ಆಗಲಿಕೆಯಿಂದ ರಾಜ್ಯದ ಅದರಲ್ಲೂ ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ ಮುತ್ಸಧ್ಧಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದ್ದು, ರಾಜಕೀಯ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ. ಕೆ. ವಸಂತ ಬಂಗೇರರವರ ನಿಧನದಿಂದ ಅವರ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿ ಬಂಧುಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಸರ್ವ ಶಕ್ತಿಯನ್ನು ನೀಡಲೆಂದು ಹಾಗೂ ದಿವಂಗತರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಯು.ಟಿ. ಖಾದರ್ ಸಂತಾಪ ಸೂಚಿಸಿದ್ದಾರೆ.