Mangalore: ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಮಂಗಳೂರು: ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಮೇ.5 ರಂದು ಎಡಪದವಿನ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗೋಪಾಲ ಕಾರಂತ ಅವರು ಉದ್ಘಾಟಿಸಿ, ಶುಭಹಾರೈಸಿದರು.
ಖ್ಯಾತ ನ್ಯಾಯವಾದಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯ ವಿಜಯ್ ಗೌಡ ಶಿಬ್ರಿಕೆರೆ ಶ್ರಮದಾನಕ್ಕೆ ಚಾಲನೆ ನೀಡಿದರು. ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕ ವಿಭಾಗದ ಮುಖ್ಯ ಶೈಕ್ಷಣಿಕ ಸಂಯೋಜಕರಾದ ಪ್ರೊ. ವಸಂತಿ ಪಿ. ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜೈನ್ ಕಾಲೇಜಿನ ದೈಹಿಕ ಶಿಕ್ಷಣದ ಉಪನ್ಯಾಸಕರಾದ ನವೀನ್ ಎಂ. ಹೆಗ್ಡೆ ಅವರು ಎನ್‌ಎಸ್‌ಎಸ್‌ನಲ್ಲಿನ ತಮ್ಮ ಅನುಭವಗಳೊಂದಿಗೆ ಮಾರ್ಗದರ್ಶನ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ. ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಆಡಳಿತಾಧಿಕಾರಿ ಪ್ರೇಮನಾಥ ಶೆಟ್ಟಿ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಗಾಯತ್ರಿ, ಕಾಲೇಜಿನ ಮುಖ್ಯೋಪಾದ್ಯಾಯರಾದ ಸುಬ್ರಹ್ಮಣ್ಯ ಮೊಗೆರಾಯ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎನ್‌ಎಸ್‌ಎಸ್ ಯೋಜನಾಧಿಕಾರಿಗಳಾದ ಡಾ. ಲೋಕೇಶ್‌ನಾಥ್ ಸ್ವಾಗತಿಸಿದರು. ಡಾ. ಮೋಹನ್‌ದಾಸ್ ವಂದಿಸಿ, ಶಾಂತಿ ನಿರೂಪಿಸಿದರು.
