Mangalore: ಜನರ ಪ್ರಾಣವನ್ನು ಪಣಕ್ಕಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್‌ನ ಗ್ಯಾರಂಟಿ: ಬ್ರಿಜೇಶ್ ಚೌಟ

Mangalore: ಜನರ ಪ್ರಾಣವನ್ನು ಪಣಕ್ಕಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್‌ನ ಗ್ಯಾರಂಟಿ: ಬ್ರಿಜೇಶ್ ಚೌಟ


ಮಂಗಳೂರು: ಜನರ ಜೀವ ಉಳಿಸಲು ಹಗಲಿರುಳು ದುಡಿಯುವ ಆಂಬ್ಯುಲೆನ್ಸ್ ಸಿಬ್ಬಂದಿಯ ಜೀವನಕ್ಕೆ ಗ್ಯಾರಂಟಿ ಇಲ್ಲದಿರುವುದು ದುರಂತ. ಸತತ ಮೂರು ತಿಂಗಳಿಂದ ಸಂಬಳ ನೀಡದೆ ಸತಾಯಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಆಡಳಿತ ಕೇವಲ ಪ್ರಚಾರಕಷ್ಟೇ ಸೀಮಿತವಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಣ್ಣ ಸಮಸ್ಯೆಯಿಂದ ಸಂಬಳ ನೀಡುವಲ್ಲಿ ವಿಳಂಬವಾಗಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುವ ಆರೋಗ್ಯ ಸಚಿವರೇ, ಕನಿಷ್ಠ ಸಂಬಳಕ್ಕೆ ಜೀವದ ಹಂಗು ತೆರೆದು ಕೆಲಸ ಮಾಡುವ ಜೀವ ರಕ್ಷಕ ಆಂಬುಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಮೂರು ತಿಂಗಳಿಂದ ಸಂಬಳ ನೀಡದಿರುವುದು ಸಣ್ಣ ಸಮಸ್ಯೆ..? ನೀವು ಹೇಳುವಂತಹ ಸಣ್ಣ ಸಮಸ್ಯೆಯನ್ನು ಪರಿಹಾರ ಮಾಡಲು ಇಷ್ಟು ತಿಂಗಳಾದರೂ ಸಾಧ್ಯವಾಗದೇ ಇರುವಾಗ ನಿಮಗೆ ರಾಜ್ಯದ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹಾರ ಮಾಡಲು ಸಾಧ್ಯವಿದೆಯೇ? 

ಆಂಬುಲೆನ್ಸ್ ಸೇವೆಯ ವ್ಯತ್ಯಾಯದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿದರೆ ಅದರ ನೇರ ಹೊಣೆಯನ್ನು ಕಾಂಗ್ರೆಸ್ ಸರ್ಕಾರ ಹೊರಬೇಕಾಗುತ್ತದೆ. ಆಂಬುಲೆನ್ಸ್ ಸಿಬ್ಬಂದಿಗಳ ವೇತನವನ್ನು ಬಿಡುಗಡೆ ಮಾಡುವ ಮೂಲಕ ಮುಷ್ಕರವನ್ನು ಶೀಘ್ರವಾಗಿ ಹಿಂಪಡೆಯುವಂತೆ ನೋಡಿಕೊಳ್ಳಬೇಕೆಂದು ರಾಜ್ಯದ ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ ಎಂದು ಬಿಜೇಶ್ ಚೌಟ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article