Mangalore: ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾಚಣೆ-ಮದ್ಯ ನಿಷೇಧ

Mangalore: ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾಚಣೆ-ಮದ್ಯ ನಿಷೇಧ

ಮಂಗಳೂರು: ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಾದ್ಯಂತ ಜೂ.1 ರಂದು ಸಂಜೆ 4 ಗಂಟೆಯಿಂದ, 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳು ಎಂದು ಘೋಷಿಸಿ ಜಿಲ್ಲಾಧಿಕಾರಿಗಳೂ ಆಗಿರುವ ಜಿಲ್ಲಾದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.

ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮ್ಯದದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಪಿಲರಿಗಳು, ಸ್ಟಾರ್ ಹೊಟೇಲ್‌ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article