Putturu: ಉದ್ಯೋಗಾಂಕ್ಷಿಗಳಿಗೆ ಶಾಸಕರ ಟ್ರಸ್ಟ್ ಮೂಲಕ ನೇರ ನೇಮಕಾತಿ: ಯುವಕ-ಯುವತಿಯರಿಂದ 2500 ಹುದ್ದೆಗೆ ಅರ್ಜಿ ಆಹ್ವಾನ

Putturu: ಉದ್ಯೋಗಾಂಕ್ಷಿಗಳಿಗೆ ಶಾಸಕರ ಟ್ರಸ್ಟ್ ಮೂಲಕ ನೇರ ನೇಮಕಾತಿ: ಯುವಕ-ಯುವತಿಯರಿಂದ 2500 ಹುದ್ದೆಗೆ ಅರ್ಜಿ ಆಹ್ವಾನ


ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕಂಪೆನಿಯೊಂದಕ್ಕೆ 2500 ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಉದ್ಯೋಗ ಆಕಾಂಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುತ್ತೂರು, ಬಂಟ್ವಾಳ, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ವ್ಯಾಪ್ತಿಯ ಉದ್ಯೋಗಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪೆನಿಯು ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಮತ್ತು ವೈದ್ಯಕೀಯ ಸೌಲಭ್ಯಗಳ ಸಹಿತ ಉತ್ತಮ ವೇತನವನ್ನು ನೀಡಲಿದೆ. ಎಸ್‌ಎಸ್‌ಎಲ್‌ಸಿಯಿಂದ ಪದವಿ ತನಕ ವ್ಯಾಸಂಗ ಮಾಡಿರುವ 18 ರಿಂದ 26 ವರ್ಷದ ವಯೋಮಾನದ 2000 ಮಹಿಳಾ ಅಭ್ಯರ್ಥಿಗಳು ಹಾಗೂ 500 ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ನಾಲ್ಕು ಫೋಟೋ, ಆಧಾರ್ ಕಾರ್ಡು, ಪಾನ್ ಕಾರ್ಡು ಸಹಿತ ಟ್ರಸ್ಟ್‌ನ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಸಹಿತ ತರಬೇತಿ ಕಾರ್ಯವೂ ನಡೆಯಲಿದೆ. ಐಟಿಐ, ವೆಲ್ಡರ್ ಹಗೂ ಟೆಕ್ನಿಷಿಯನ್‌ಗಳಿಗೂ ಕಂಪೆನಿಯಲ್ಲಿ ಉದ್ಯೋಗವಕಾಶವಿದ್ದು ವಿದ್ಯಾವಂತ ಉದ್ಯೋಗಾಕಾಂಕ್ಷಿಗಳು ಇದರ ಪ್ರಯೋಜನವವನ್ನು ಪಡೆದುಕೊಳ್ಳುವಂತೆ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.


ಉದ್ಯೋಗಕ್ಕೆ ಹೊಸ ಪ್ರಯತ್ನ:

ಉತ್ತಮ ಕಂಪೆನಿಯ ಜೊತೆ ಟೈಅಪ್ ಮಾಡಿಕೊಂಡು ತನ್ನ ವಿಧಾನಸಭಾ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದೇನೆ. ಅಭ್ಯರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಈ ಕಂಪೆನಿಯಲ್ಲಿ ಉದ್ಯೋಗಕ್ಕೆ ಸೇರಿಕೊಳ್ಳಬಹುದಾಗಿದೆ. ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ವ್ಯಾಪ್ತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಉತ್ತಮ ವೇತನ ಮತ್ತು ಇತರೆ ಸೌಲಭ್ಯಗಳನ್ನು ಕಂಪೆನಿ ಒದಗಿಸಲಿದೆ. ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. -ಅಶೋಕ್ ಕುಮಾರ್ ರೈ, ಶಾಸಕರು ಹಾಗೂ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article