Subramanya: ಕುಕ್ಕೆ ದೇವಸ್ಥಾನಕ್ಕೆ ಯೇಸುರಾಜ್ ನೂತನ ಎಇಒ-ಸೃಷ್ಟಿಯಾದ ವಿವಾದ

Subramanya: ಕುಕ್ಕೆ ದೇವಸ್ಥಾನಕ್ಕೆ ಯೇಸುರಾಜ್ ನೂತನ ಎಇಒ-ಸೃಷ್ಟಿಯಾದ ವಿವಾದ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ಮಂಗಳವಾರ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿವಾದ ಸೃಷ್ಟಿಯಾಗಿದೆ.

ಕ್ರಿಶ್ಚಿಯನ್ ಸಮುದಾಯದ ಅಧಿಕಾರಿಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷದ್ ಆಕ್ಷೇಪ ಸೃಷ್ಟಿಸಿದೆ.

ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜುರಾಯಿ ವಿಭಾಗದಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದ ಇವರನ್ನು ಕುಕ್ಕೆ ದೇವಳದ ನೂತನ ಎಇಒ ಆಗಿ ಸರ್ಕಾರ ನೇಮಿಸಿತ್ತು. ನೂತನ ಎಇಒಗೆ ಪ್ರಭಾರ ಎಇಒ ಪರಮೇಶ್ ಅಧಿಕಾರ ಹಸ್ತಾಂತರಿಸಿದರು.

ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ನೂತನ ಎಇಒ ಯೇಸುರಾಜ್ ಅವರನ್ನು ಸ್ವಾಗತಿಸಿದರು. ಬಳಿಕ ನಿರ್ಗಮಿತ ಎಇಒ ಪರಮೇಶ್ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಬಿಳ್ಕೊಡಲಾಯಿತು. ಕಚೇರಿ ಅಧಿಕ್ಷಕ ಪದ್ಮನಾಭ ಶೆಟ್ಟಿಗಾರ್, ಅಭಿಯಂತ ಉದಯಕುಮಾರ್, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ಮಹೇಶ್ ಕುಮಾರ್ ಎಸ್. ಸಿಬ್ಬಂದಿಗಳು ಉಪಸ್ಥಿತರಿದ್ದರು.


'ಹಿಂದೂ ಧಾರ್ಮಿಕ ದತ್ತಿ ಕಾಯಿದೆಯಡಿಯಲ್ಲಿ ದೇವಸ್ಥಾನಗಳಿಗೆ ಹಿಂದೂ ಅಧಿಕಾರಿಗಳನ್ನು ಮಾತ್ರ ನೇಮಿಸಬೇಕು ಎಂದು ನಿಯಮ ಇದೆ. ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ಯೇಸುರಾಜ್ ಅವರು ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್ ಎಂಬುದನ್ನು ಸರ್ಕಾರ ದೃಢೀಕರಿಸಬೇಕು ಎಂದು ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.'

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article