
Udupi: ಮಂಗನ ಕಾಯಿಲೆಗೆ ಬಾಲಕಿ ಬಲಿ
Tuesday, May 7, 2024
ಉಡುಪಿ: ಕ್ಯಾಸನೂರು ಅರಣ್ಯ ರೋಗ (ಕೆಎಫ್‌ಡಿ) ಅಥವಾ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿದೆ.
ಸಿದ್ದಾಪುರ ತಾಲೂಕಿನಲ್ಲಿ ಎಂಟು ಸಾವು ದಾಖಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನೀರಜ್ ಬಿ.ವಿ. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 99 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಿದ್ದಾಪುರ ತಾಲೂಕು ಒಂದರಲ್ಲೇ 90 ಪ್ರಕರಣ ವರದಿಯಾಗಿದೆ.
ಪ್ರತೀ ಬೇಸಿಗೆಯಲ್ಲಿ ಮಂಗನ ಕಾಯಿಲೆ ಸಾಮಾನ್ಯವಾಗಿದೆ. ಆದರೂ ಕಳೆದ ವರ್ಷ ಕಡಿಮೆ ಮಳೆಯಿಂದಾಗಿ ಮತ್ತು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹೆಚ್ಚಿನ ತಾಪಮಾನದಿಂದಾಗಿ ಈ ವರ್ಷ ತೀವ್ರವಾಗಿದೆ. ಳಿದ್ದಾರೆ.
ಜೀವ ರಕ್ಷಕ ಕೆಎಫ್‌ಡಿ ಸೋಂಕಿನ ಲಸಿಕೆ 2020ರಿಂದ ಜಿಲ್ಲೆಯಲ್ಲಿ ಅಲಭ್ಯವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.