Udupi: ಪ್ರಜ್ವಲ್ ರೇವಣ್ಣ ಪ್ರಕರಣ ಬಿಜೆಪಿ ಮೇಲೆ ಪರಿಣಾಮ ಬೀರದು: ಅಣ್ಣಾಮಲೈ
Friday, May 3, 2024
ಉಡುಪಿ: ರಾಜ್ಯ ಮಾತ್ರವಲ್ಲದೇ ದೇಶವ್ಯಾಪಿ ಸುದ್ದಿ ಮಾಡಿರುವ ಪ್ರಜ್ವಲ್ ರೇವಣ್ಣ ಪ್ರಕರಣ ರಾಜ್ಯದಲ್ಲಿ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜ್ವಲ್ ಪ್ರಕರಣ ಬಗ್ಗೆ ಬಿಜೆಪಿ ನಿಲುವಿನ ಬಗ್ಗೆ ಅಮಿತ್ ಶಾ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.
ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಪ್ರಚಾರ ನಡೆಸಿದ ಅಣ್ಣಾಮಲೈ, ಕ್ಷೇತ್ರದಲ್ಲಿ ಕನಿಷ್ಠ ಮೂರು ಲಕ್ಷ ಮತಗಳಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದರು.
ಉತ್ತರ ಭಾರತದಲ್ಲಿ ಟೆಂಪಲ್ ಕಾರಿಡಾರ್ ನಿರ್ಮಾಣವಾಗುತ್ತಿದ್ದಂತೆಯೇ ಪ್ರಧಾನಿ ಮೋದಿ, ಬಿಜೆಪಿ ದಕ್ಷಿಣ ಭಾರತದಲ್ಲೂ ಟೆಂಪಲ್ ಕಾರಿಡಾರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಿರುನಾಮಲೈಯಲ್ಲಿ ಕಾರಿಡಾರ್ ಸ್ಥಾಪಿಸುವ ಕುರಿತು ಈಗಾಗಲೇ ಪ್ರಧಾನಿ ಮೋದಿ ಜೊತೆ ಮಾತನಾಡಿದ್ದು, ಕರ್ನಾಟಕದ ಕೊಲ್ಲೂರಿನಲ್ಲಿ ಕಾರಿಡಾರ್ ಸ್ಥಾಪಿಸಲು ಮತ್ತು ಅದನ್ನು ಸ್ವತಃ ಉದ್ಘಾಟಿಸಲು ಯೋಜಿಸಲಾಗಿದೆ ಎಂದರು.