
Udupi: ಮತ ಎಣಿಕೆ-ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ
Thursday, May 30, 2024
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಜೂನ್ 4ರಂದು ಅಜ್ಜರಕಾಡು ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದ್ದು, ಅಂದು ಬೆಳಿಗ್ಗೆ 5 ಗಂಟೆಯಿಂದ ಮತ ಎಣಿಕೆ ಮುಗಿಯುವ ವರೆಗೆ ಆ ರಸ್ತೆಯಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಜೂ. 4ರಂದು ಬ್ರಹ್ಮಗಿರಿ ಜಂಕ್ಷನ್‌ನಿಂದ ನಾಯಕ್ ಕ್ಯಾಂಟೀನ್ ವರೆಗೆ ಮತ್ತು ಅಜ್ಜರಕಾಡು ಜಂಕ್ಷನ್‌ನಿಂದ ಸುದರ್ಶನ್ ರೆಸಿಡೆನ್ಸಿ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಬೇಕು
ಮತ ಎಣಿಕೆಯ ಸಂಬಂಧ ಸರಕಾರಿ ಅಧಿಕಾರಿಗಳ ವಾಹನಗಳ ಪಾರ್ಕಿಂಗ್ ದೃಷ್ಟಿಯಿಂದ ಜೂ. 4ರಂದು ಬ್ರಹ್ಮಗಿರಿ ಜಂಕ್ಷನ್‌ನಿಂದ ಅಜ್ಜರಕಾಡು ಜಂಕ್ಷನ್ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಹಾಗೂ ಅಜ್ಜರಕಾಡು ಜಂಕ್ಷನ್‌ನಿಂದ ಬ್ರಹ್ಮಗಿರಿ ಜಂಕ್ಷನ್ ವರೆಗಿನ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಬದಲಾಯಿಸಿದೆ.