Ujire: ನಂದಗೋಕುಲ ಗೋಶಾಲೆಯ ನಿರ್ವಹಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ರೂ. ಆರ್ಥಿಕ ನೆರವು

Ujire: ನಂದಗೋಕುಲ ಗೋಶಾಲೆಯ ನಿರ್ವಹಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ರೂ. ಆರ್ಥಿಕ ನೆರವು


ಉಜಿರೆ: ಕಳೆಂಜ ಗ್ರಾಮದ ಕಾಯರ್ತಡ್ಕ ‘ನಂದಗೋಕುಲ’ ಗೋಶಾಲೆಯ ದೀಪೋತ್ಸವ ಮತ್ತು ಗೋಶಾಲೆ ನಿರ್ವಹಣೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 5 ಲಕ್ಷ ರೂ.ನ ಆರ್ಥಿಕ ನೆರವನ್ನು ನೀಡಿರುತ್ತಾರೆ. 

ಶ್ರೀ ಕ್ಷೇತ್ರದ ಪರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಅವರು ನಂದಗೋಕುಲ ಗೋಶಾಲೆ ನಿರ್ವಹಣೆಯ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪದಾಧಿಕಾರಿಗಳಿಗೆ ನೆರವನ್ನು ಹಸ್ತಾಂತರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಇಂಜಿನಿಯರ್ ಸುರೇಶ್, ಕಳೆ೦ಜ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಉಮೇಶ್, ಕಳೆ೦ಜ ಗ್ರಾಮದ ಸೇವಾ ಪ್ರತಿನಿಧಿ ಜನಾರ್ಧನ, ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟಿನ ಅಧ್ಯಕ್ಷ ಡಾ. ಎಂ.ಎಂ. ದಯಾಕರ್, ಕಾರ್ಯದರ್ಶಿ  ಸುಬ್ರಮಣ್ಯ ಕುಮಾರ್ ಅಗರ್ತ, ನಂದಗೋಕುಲ ದೀಪೋತ್ಸವ ಸಂಚಾಲನ ಸಮಿತಿಯ ಪದಾಧಿಕಾರಿಗಳಾದ ರಮೇಶ್ ಧರ್ಮಸ್ಥಳ, ಕುಮಾರನಾಥ, ರಾಘವೇಂದ್ರ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ವತಿಯಿಂದ ಅಧ್ಯಕ್ಷ ಡಾ. ಎಂ.ಎಂ. ದಯಾಕರ್ ಅವರು ಆರ್ಥಿಕ ನೆರವು ನೀಡಿದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಗೌರವಪೂರ್ವಕ ಕೃತಜ್ಞತೆ ಅರ್ಪಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article