Ujire: ಪುತ್ತೂರು ಗಂಗಾಧರ ನಿಧನಕ್ಕೆ ಹೆಗ್ಗಡೆ ಸಂತಾಪ
Saturday, May 4, 2024
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರತಿಭಾವಂತ ಕಲಾವಿದ ಪುತ್ತೂರು ಗಂಗಾಧರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.
ತನ್ನ ೧೪ನೇ ವಯಸ್ಸಿನಲ್ಲಿ ಕ್ಷೇತ್ರದಲ್ಲಿರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಯಾಗಿ ಸೇರಿದ ಅವರು ವಿದ್ಯಾರ್ಜನೆ ಮುಗಿದ ಬಳಿಕ ನಮ್ಮ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಕಲಾವಿದರಾಗಿ ೪೨ ವರ್ಷಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಹಾಸ್ಯದಿಂದ ಪ್ರಾರಂಭಿಸಿ ರಾಜನ ಪಾತ್ರದವರೆಗೆ ಎಲ್ಲಾ ತರಹದ ವೇಷವನ್ನು ಮಾಡಬಲ್ಲ ಸಮರ್ಥ ಕಲಾವಿದರಾಗಿದ್ದರು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ಉಂಟಾದ ದು:ಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ ಎಂದವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.