Beltangadi: ಬಿಜೆಪಿ ಮುಖಂಡನ ಮೇಲೆ ತಲವಾರಿನಿಂದ ಹಲ್ಲೆ
Wednesday, June 5, 2024
ಬೆಳ್ತಂಗಡಿ: ಬಿಜೆಪಿ ಮುಖಂಡ, ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಎಂಬವರ ಮೇಲೆ ತಲವಾರು ದಾಳಿ ಘಟನೆ ಕಾಯರ್ತಡ್ಕದಲ್ಲಿ ಮಂಗಳವಾರ ಸಂಜೆ ನಡೆದಿದ್ದು, ಗಾಯಗೊಂಡ ರಾಜೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಯರ್ತಡ್ಕ ಕಜೆ ನಿವಾಸಿ, ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ಹಲ್ಲೆ ನಡೆಸಿದ ಆರೋಪಿ.
ಕ್ಷುಲ್ಲಕ ಕಾರಣಕ್ಕೆ ಇವರ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ರಾಜೇಶ್ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ತನಿಖೆ ಆರಂಭಿಸಿದ್ದಾರೆ.