
D.K: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಶಾಲೆಗಳಿಗೆ ನಾಳೆ ರಜೆ
Wednesday, June 26, 2024
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ವ್ಯಾಪಕವಾಗಿ ಸುರಿಯುತ್ತಿದ್ದು, ಜೂ.27 ರಂದು ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಜೆ ಘೊಷಿಸಲಾಗಿದೆ.
ಮಂಗಳವಾರ ಸಂಜೆಯಿಂದ ವಿಪರೀತ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಜೆಯನ್ನು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.