.jpg)
Kapu: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ
Wednesday, June 19, 2024
ಕಾಪು: ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ನಿಲುವು ಖಂಡಿಸಿ ಜೂ.19 ರಂದು ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮಪುರ ಬಳಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.
ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ರಾಜ್ಯ ಬಿಜೆಪಿ ಎಸ್.ಸಿ. ಮೋರ್ಚಾದ ಉಪಾಧ್ಯಕ್ಷ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಮಟ್ಟು, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಜಿಲ್ಲಾ ಮತ್ತು ಕಾಪು ಮಂಡಲದ ವಿವಿಧ ಮೋರ್ಚಾಗಳ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಪಕ್ಷದ ಹಿರಿಯರು, ಪ್ರಮುಖ, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.