Kundapura: ನೂತನ ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಆನೆಗುಡ್ಡೆ ದೇವಳಕ್ಕೆ ಭೇಟಿ
Wednesday, June 5, 2024
ಕುಂದಾಪುರ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಗೊಂಡ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಸಪತ್ನೀಕರಾಗಿ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಈ ವೇಳೆ ದೇವಳದ ಅನುವಂಶಿಕ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ಮತ್ತು ಆಡಳಿತ ಸಮಿತಿಯ ಸದಸ್ಯರು ನೂತನ ಸಂಸದರನ್ನು ಬರಮಾಡಿಕೊಂಡರು. ಹಿರಿಯ ಮಾಜಿ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಯರು ಶ್ರೀನಿವಾಸ ಪೂಜಾರಿ ದಂಪತಿಯನ್ನು ದೇವರ ಪ್ರಸಾದ ನೀಡಿ ಗೌರವಿಸಿದರು.