
Mangalore: ಜೂನ್ 15ರಂದು ಮಂಗಳೂರು ವಿ.ವಿ. ಘಟಿಕೋತ್ಸವ
Monday, June 10, 2024
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂನ್ 15 ರಂದು ಮಧ್ಯಾಹ್ನ 12.15ಕ್ಕೆ ಮಂಗಳಗಂಗೋತ್ರಿಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
ಕುಲಾಧಿಪತಿಗಳು ಹಾಗೂ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ ನವದೆಹಲಿಯ ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆಯ ಮಹಾನಿರ್ದೇಶಕರಾದ ಪ್ರೊ.. ಸಚಿನ್ ಚತುರ್ವೇದಿ ಮುಖ್ಯ ಅತಿಥಿಗಳಾಗಿ ಹಾಗೂ ಘಟಿಕೋತ್ಸವದ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.