Mangalore: ಮಂಗಳೂರು ವಿಧಾನಸಭಾ ಕ್ಷೇತ್ರ-249 ಕೋಟಿ ವೆಚ್ಚದಲ್ಲಿ ಪ್ರತ್ಯೇಕ ನೀರಿನ ವ್ಯವಸ್ಥೆ: ಯು.ಟಿ. ಖಾದರ್

Mangalore: ಮಂಗಳೂರು ವಿಧಾನಸಭಾ ಕ್ಷೇತ್ರ-249 ಕೋಟಿ ವೆಚ್ಚದಲ್ಲಿ ಪ್ರತ್ಯೇಕ ನೀರಿನ ವ್ಯವಸ್ಥೆ: ಯು.ಟಿ. ಖಾದರ್


ಮಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಮಂಗಳೂರು(ಉಳ್ಳಾಲ) ಕ್ಷೇತ್ರದ ಜನತೆಗೆ 24*7 ಕುಡಿಯುವ ನೀರು ಒದಗಿಸುವ ಯೋಜನೆ ಜಾರಿಗೊಳಿಸುವ ಬಗ್ಗೆ ಮಾತು ಕೊಟ್ಟಿದ್ದೆ. ಅದರಂತೆ 249 ಕೋಟಿ ರೂ. ವೆಚ್ಚದಲ್ಲಿ ಉಳ್ಳಾಲಕ್ಕೆ ಪ್ರತ್ಯೇಕ ನೀರಿನ ವ್ಯವಸ್ಥೆಯ ಪ್ರಥಮ ಹಂತದ ಕಾಮಗಾರಿ ಪೂರ್ಣಗೊಂಡಿದೆ. ಈ ಪ್ರಥಮ ಹಂತದ ಉದ್ಘಾಟನೆ ಹಾಗೂ ೨ನೇ ಹಂತದ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೂಲಕ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಸ್ಥಳೀಯ ಶಾಸಕರೂ ಆಗಿರುವ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಬಿಡುಗಡೆಯಾದ 249 ಕೋಟಿ ರೂ.ಗಳಲ್ಲಿ ಸಜಿಪದಲ್ಲಿ ಜಾಕ್ವೆಲ್ನಿಂದ ಕೊಣಾಜೆಗೆ ನೀರನ್ನು ಪೂರೈಸಿ ಶುದ್ಧೀಕರಣಗೊಂಡು ಪೈಪ್‌ಲೈನ್ ಮೂಲಕ ಉಳ್ಳಾಲ, ತಲಪಾಡಿವರೆಗೆ ಹರಿಸುವ ಕಾಮಗಾರಿ ಪೂರ್ಣಗೊಂಡಿದೆ. ಚೆಂಬುಗುಡ್ಡೆಯಲ್ಲಿ ಕ್ಷೇತ್ರದ ನಗರ ಭಾಗಕ್ಕೆ ನೀರು ಪೂರೈಸಲು 70 ಲಕ್ಷ ಲೀಟರ್ ಟ್ಯಾಂಕ್ ನಿರ್ಮಾಣವಾಗಿದೆ. 2ನೇ ಹಂತದಲ್ಲಿ ಗ್ರಾಮೀಣ ಮಟ್ಟಕ್ಕೂ ನೀರು ಪೂರೈಕೆಗಾಗಿ ಮುಖ್ಯ ಟ್ಯಾಂಕ್‌ಗೆ  ನೀರು ಹರಿಸಿ ಅಲ್ಲಿಂದ ಸಣ್ಣ ಟ್ಯಾಂಕ್ಗಳಿಂದ ಮನೆಗಳಿಗೆ ಸಂಪರ್ಕ ನೀಡುವ ಕೆಲಸ ನಡೆಯಲಿದೆ. ಇದಕ್ಕಾಗಿ ೩೮೬ ಕೋಟಿ ರು..ಗಳ ಅನುದಾನ ಬಿಡುಗಡೆ ಆಗಿದೆ. ಇದರ ಜತೆಯಲ್ಲಿ ರಸ್ತೆ ಹಾಗೂ ವಿದ್ಯುತ್, ಶಿಕ್ಷಣಕ್ಕೆ ಅನುದಾನ ಮೀಸಲಿಡಲಾಗಿದೆ. ಇದಲ್ಲದೆ, ಅಬ್ಬಕ್ಕ ಭವನ ಹಾಗೂ ಬ್ಯಾರಿ ಭವನ ಕೆಲಸ ಅಗಲಿದೆ ಎಂದು ಹೇಳಿದರು.

ಸಮುದ್ರಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಸಭೆ, ಚರ್ಚೆ ನಡೆದಿದೆ. ಸಮುದ್ರ ಕಿನಾರೆಯಲ್ಲಿ ಶಾಶ್ವತ ಯೋಜನೆ ಮೂಲಕ ಮುಂಬೈ, ಚೆನ್ನೈ ಹಾಗೂ ಕೇರಳದಲ್ಲಿ ಮಾಡಿರುವ ಯೋಜನೆ ಫಲಪ್ರದವಾಗಿಲ್ಲ. ಹಾಗಾಗಿ ತಜ್ಞರನ್ನು ಕರೆಸಿಕೊಂಡು ಈ ಕಾರ್ಯ ಮಾಡಲು ಸಭೆಯಲ್ಲಿ ಸಲಹೆ ನೀಡಲಾಗಿದೆ. ಕಳೆದ ವರ್ಷ ಮನೆ ನಾಶ ಆಗದ ರೀತಿಯಲ್ಲಿ ಕ್ರಮ ವಹಿಸಲಾಗಿತ್ತು. ಈ ಬಾರಿಯೂ ಅಪಾಯಕಾರಿ ಜಾಗವನ್ನು ಗುರುತಿಸಿ ಕ್ರಮ ವಹಿಸಲು ಮುಂದಾಗಿದ್ದರೂ ಯಾವ ಜಾಗದಲ್ಲಿ ಕಡಲ್ಕೊರೆತ ಸಂಭವಿಸುತ್ತದೆ ಎಂದು ಮುಂಚಿತವಾಗಿ ಹೇಳಲು ಸಾಧ್ಯವಾಗದೆ ತೊಂದರೆಯಾಗುತ್ತಿದೆ. ಬಟ್ಟಂಪಾಡಿಯಲ್ಲಿ ಕಡತ್ಕೊರೆತಕ್ಕೆ ಸಂಬಂಧಿಸಿ ಎರಡು ಪ್ರಸ್ತಾವನೆ ಸಿದ್ಧವಾಗಿದೆ ಎಂದರು.

ಮುಂಬೈಯಿಂದ ಕೊಚ್ಚಿಗೆ ಕ್ರೂಸ್ಗೆ ಸೋಮೇಶ್ವರದಲ್ಲಿ ಬಂದರು ನಿರ್ಮಾಣ ಕೇಂದ್ರ ಸರ್ಕಾರ ಮುಂಬೈನಿಂದ ಕೊಚ್ಚಿಗೆ ಕ್ರೂಸ್ (ಪ್ರಯಾಣಿಕ ಹಡಗು ಸೇವೆ) ಆರಂಭಿಸಲಿದೆ. ಈ ಕ್ರೂಸ್ಗೆ ಉಳ್ಳಾಲದ ಸೋಮೇಶ್ವರದಲ್ಲಿ ನಿಲುಗಡೆಗೆ ಮಾಡಲು ಪೂರಕವಾದ ಬಂದರು ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರದೇಶ ಪ್ರಯಾಣಿಕ ಹಡಗು ತಂಗುದಾಣ ನಿರ್ಮಿಸಲು ಪ್ರಶಾಂತವಾದ ಹಾಗೂ ಪ್ರವಾಸಿ ತಾಣವಾಗಿ ರೂಪಿಸಲು ಉತ್ತಮ ಸ್ಥಳವಾಗಿದ್ದು, ಈ ನಿಟ್ಟಿನಲ್ಲಿ ಯೋಜನೆ ಸಿದ್ಧಗೊಳ್ಳುತ್ತಿದೆ ಎಂದು ಹೇಳಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article